ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇನೆ. ನನಗೆ ಕೊಟ್ಟಿರುವ ಕೆಲಸವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕ ಹಾಗೂ ದಕ್ಷತೆಯಿಂದ ನಾನು ಕೆಲಸ ನಿರ್ವಹಿಸಿದ್ದೇನೆ. ೨ನೇ ವರ್ಷದಲ್ಲಿ ಬಹಳಷ್ಟು ಸವಾಲುಗಳಿವೆ ಅದನ್ನು ನಿಭಾಯಿಸುತ್ತೇನೆ. ಯಾವುದೇ ಸಮಸ್ಯೆ ಕೂಡ ನನಗೆ ಕಠಿಣ ಅನಿಸುತ್ತಿಲ್ಲ ಎಂದು ಹೇಳಿದ್ದಾರೆ.