Saturday, March 28, 2026
Google search engine

Homeಅಪರಾಧಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಜನವರಿ ತಿಂಗಳಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಪಠಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ತನಿಖೆಯ ಸಮಯದಲ್ಲಿ ಗಣೇಶ್ ಪ್ರಸಾದ್ ಎಂಬ ಫೇಸ್ ಬುಕ್ ಖಾತೆಯಿಂದ ಕೋಮು ಪ್ರಚೋದಕ ಕಮೆಂಟ್ ಗಳನ್ನು ಹಾಕಿದ ವ್ಯಕ್ತಿಯು ಕಾಸರಗೋಡು ಜಿಲ್ಲೆ, ಮಂಜೇಶ್ವರದ ಗಣೇಶ್ ಪ್ರಸಾದ್ ಎಂದು ತನಿಖೆಯಲ್ಲಿ ಕಂಡು ಬಂದಿದೆ. ಹೀಗಾಗಿ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಬಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

RELATED ARTICLES
- Advertisment -
Google search engine

Most Popular