ಮಂಗಳೂರು ನಗರದಲ್ಲಿ 2025ರಲ್ಲಿ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 179/2025 ಕಲಂ 353 (1), 353(2), 61 (2), 55 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.
ತನಿಖೆಯ ಸಮಯದಲ್ಲಿ TN- MADDY ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿಯು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ ಎಂದು ತನಿಖೆಯಲ್ಲಿ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆರೋಪಿತನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ: 95/2025 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.



