Saturday, April 19, 2025
Google search engine

Homeಅಪರಾಧಕಾವೇರಿ ನದಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ಕಾವೇರಿ ನದಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ಹಲಗೂರು: ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಕನಕಪುರ ತಾಲ್ಲೂಕಿನ ಹುಣಸನಹಳ್ಳಿಯ ಸಿದ್ದಾಚಾರಿ (೨೮) ಎಂಬವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದರು.

ಈ ಘಟನೆಯನ್ನು ಪ್ರವಾಸಿಗರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮದ್ದೂರು ತಾಲ್ಲೂಕಿನ ಕೂಳಗೆರೆಯ ಅವರು ಮರಗೆಲಸ ಮಾಡುತ್ತಿದ್ದರು. ಪತ್ನಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ನಾಲ್ಕು ದಿನಗಳ ಬಳಿಕ ಮಗವೂ ಮೃತಪಟ್ಟಿತ್ತು. ಇಬ್ಬರ ಸಾವಿನಿಂದ ಜಿಗುಪ್ಸೆಗೊಂಡು ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಸಂಬಂಧಿಕರು ಸೋಮವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಮಳವಳ್ಳಿ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular