ಚಾಮರಾಜನಗರ : ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಅಪರಾಧಿಗೆ ೪ ವರ್ಷಗಳ ಕಾಲ ಸೆರೆವಾಸ ಮತ್ತು ೫ ಸಾವಿರ ರೂ, ದಂಡ ವಿಧಿಸಿ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಮದ ಕಾರ್ತಿಕ್ ಜೈಲು ಶಿಕ್ಷೆಗೆ ಗುರಿಯಾದ ಆರೋಪಿ.
ಘಟನೆ ಹಿನ್ನೆಲೆ: ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಆರೋಪಿ ಕಾರ್ತಿಕ್ ೨೬/೧೦/೨೦೧೯ರಂದು ಸಂಜೆ ೬.೩೦ಕ್ಕೆ ಕೊಳ್ಳೇಗಾಲ ಪಟ್ಟಣದ ಜೆ.ಎಸ್.ಎಸ್. ಕಾಲೇಜ್ ಸೇತುವೆ ಬಳಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸೇತುವೆ ಕೆಳಕ್ಕೆ ಕೆರೆಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದನು. ಪ್ರಕರಣ ಸಂಬಂಧ ತನಿಖಾಧಿಕಾರಿ ಕೊಳ್ಳೇಗಾಲ ಪೊಲೀಸ್ ಠಾಣೆಯ ಪಿಎಸ್‌ಐ ಜೆ.ರಾಜೇಂದ್ರ ಅವರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದಲ್ಲಿ ಆರೋಪಿ ಕಾರ್ತಿಕ್‌ಗೆ ೪ ವರ್ಷಗಳ ಕಾಲ ಸೆರೆವಾಸ ಮತ್ತು ರೂ.೫ ಸಾವಿರ ದಂಡ ವಿಧಿಸಿ ಆದೇಶಿಸಿದೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಪಿ.ಮಂಜುನಾಥ ಅವರು ವಿಚಾರಣೆ ನಡೆಸಿ, ವಾದ ಮಂಡಿಸಿದg