Sunday, April 20, 2025
Google search engine

Homeಅಪರಾಧಮನದ ಕಡಲು ಸಿನಿಮಾ ಚಿತ್ರೀಕರಣದ ವೇಳೆ ಲೈಟ್ ಬಾಯ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

ಮನದ ಕಡಲು ಸಿನಿಮಾ ಚಿತ್ರೀಕರಣದ ವೇಳೆ ಲೈಟ್ ಬಾಯ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

ಬೆಂಗಳೂರು: ಮನದ ಕಡಲು ಸಿನಿಮಾ ಚಿತ್ರೀಕರಣದ ವೇಳೆ ಅಂದಾಜು ೩೦ ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ್ದು, ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಮೋಹನ್ ಕುಮಾರ್ (೩೦) ಮೃತಪಟ್ಟ ಲೈಟ್ ಬಾಯ್. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಸಮೀಪ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.

ಮೋಹನ್ ಕುಮಾರ್ ಮತ್ತು ಸಹೋದರ ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ನೆಲೆಸಿದ್ದರು. ಚಿತ್ರರಂಗದಲ್ಲಿ ಇಬ್ಬರೂ ಲೈಟ್ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಚಿತ್ರೀಕರಣದ ವೇಳೆ ಏಣಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಸಂಜೆ ಮೋಹನ್ ಕುಮಾರ್ ಮೃತಪಟ್ಟಿದ್ದಾರೆ.

ಚಿತ್ರೀಕರಣದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪದಡಿ ನಿರ್ದೇಶಕ ಯೋಗರಾಜ್ ಭಟ್, ವ್ಯವಸ್ಥಾಪಕ ಸುರೇಶ್ ಸೇರಿ ಮೂವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular