ಚಿಕ್ಕಮಗಳೂರು: ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಂಗನಾಯಕ್(57) ಎಂಬುವವರು ಡೆತ್ ನೋಟ್ ಬರೆದಿಟ್ಟು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಒಂದು ವಾರದ ಹಿಂದಷ್ಟೇ ಬಿಇಒ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಆಗ ಹತ್ತು ಸಾವಿರ ಹಣ ಪಡೆಯುತ್ತಿದ್ದ ಬಿಇಒ ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು. ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.