Tuesday, April 8, 2025
Google search engine

Homeರಾಜ್ಯಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

ಬೆಂಗಳೂರು: ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಆದೇ ರೀತಿ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಸರ್ಕಾರ ತಿದ್ದುಪಡಿ ಆದೇಶದಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ 2024ರ ಜನವರಿ 7ರಂದು ಹೊರಡಿಸಿದ್ದ ಆದೇಶದಲ್ಲಿ ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ಹಾಡಬೇಕು’ ಎಂದು ತಿಳಿಸಲಾಗಿತ್ತು. ಆದರೆ ಯಾವ ಶಾಲೆಗಳೆಂದು ನಿರ್ದಿಷ್ಟವಾಗಿ ಹೇಳಿರಲಿಲ್ಲ.

RELATED ARTICLES
- Advertisment -
Google search engine

Most Popular