ಮಂಡ್ಯ: ಮಂಡ್ಯದ ಪೊಲೀಸ್ ಕಾಲೋನಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಬಿಜೆಪಿ ಮುಖಂಡ ಬೇಕ್ರಿ ಅರವಿಂದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೊತೆಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವೇಕಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಇದೆ ವೇಳೆ ಸಾಧಕರಿಗೆ ವಿವೇಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು .
161 ವರ್ಷಗಳಾದರು ಸ್ವಾಮಿ ವಿವೇಕಾನಂದರನ್ನು ನೆನೆಯುತ್ತಿದ್ದೇವೆ. ಅವರು ಆದರ್ಶ ಬದುಕು ನಡೆಸಿದ್ದರು ಎನ್ನುವುದು ಅರ್ಥವಾಗುತ್ತದೆ. ವಿದ್ಯಾರ್ಥಿಗಳು ತಂದೆ ತಾಯಿ ಗುರು ಹಿರಿಯರನ್ನು ಗೌರವಿಸಬೇಕು. ಗುರುಗಳು ದೇವರ ಸ್ವರೂಪ ಹಾಗಾಗಿ ಎಲ್ಲಾ ಪ್ರಾಧ್ಯಾಪಕರನ್ನು ಗೌರವಿಸಬೇಕು.ಕೆಲವರು ದೊಡ್ಡ ಹುದ್ದೆಯಲ್ಲಿದ್ದರೂ ದೇಶದ ಪ್ರಧಾನಿಯ ಬಗ್ಗೆ ಅಗೌರವವಾಗಿ ಮಾತನಾಡುತ್ತಾರೆ. ಇದು ಆಗಬಾರದು ಅಂದರೆ ನಾವು ಪ್ರತಿದಿನ ಗುರು ಹಿರಿಯರನ್ನು ಗೌರವಿಸಬೇಕು. ಸಂಸ್ಕಾರಯುತ ಶಿಕ್ಷಣ ದೊರೆತರೆ ಮಾತ್ರ ಇದು ಸಾಧ್ಯವಾಗುತ್ತದೆ.
ಸಂಸ್ಕಾರದ ಶಿಕ್ಷಣ ಕಲಿಯದಿದ್ದಲ್ಲಿ ನಾವು ಏನು ಸಾಧಿಸಲು ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮನುಜ, ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯ ಅಧ್ಯಕ್ಷ ಪೋತೇರ ಮಹದೇವು ಸೇರಿ ಹಲವರು ಭಾಗಿಯಾಗಿದ್ದರು.