Tuesday, August 12, 2025
Google search engine

Homeರಾಜ್ಯಸುದ್ದಿಜಾಲಮಂಡ್ಯ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು

ಮಂಡ್ಯ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು

ಮಂಡ್ಯ: ಮಂಡ್ಯ ಜಿಲ್ಲೆಯ ಆಲಕೆರೆ ಗ್ರಾಮದಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲ ಪೋಷಕರು ತಮ್ಮ ಮಕ್ಕಳಿಗೆ ಮೊಟ್ಟೆ ನೀಡಬೇಕೆಂದು ಒತ್ತಾಯಿಸಿದರೂ, ಗ್ರಾಮದ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಕಾರಣ, ಶಾಲೆ ಸಮೀಪದಲ್ಲೇ ವೀರಭದ್ರಸ್ವಾಮಿ ದೇವಸ್ಥಾನವಿದ್ದು, ದೇವಸ್ಥಾನ ಸುತ್ತಲೂ ಮಾಂಸಾಹಾರ ಸೇವನೆ ಮಾಡುವುದನ್ನು ಸ್ಥಳೀಯರು ವಿರೋಧಿಸುತ್ತಾರೆ.

ಮೊದಲು ಮಕ್ಕಳಿಗೆ ಮೊಟ್ಟೆ ಬದಲಿಗೆ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣು ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಅಧಿಕಾರಿಗಳು, ಮೊಟ್ಟೆ ತಿನ್ನುವ ಮಕ್ಕಳಿಗೆ ನೀಡಬೇಕು ಎಂಬ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಮೊಟ್ಟೆ ನೀಡತೊಡಗಿದರು. ಇದರಿಂದ ಗ್ರಾಮಸ್ಥರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿ, ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದಾದ ಪರಿಣಾಮವಾಗಿ, ಶಾಲೆಯ 124 ಮಕ್ಕಳ ಪೈಕಿ 70ಕ್ಕೂ ಹೆಚ್ಚು ಮಕ್ಕಳ ಪೋಷಕರು ಶಾಲೆಯಿಂದ ಮಕ್ಕಳನ್ನು ತೆಗೆದುಕೊಂಡು ಪಕ್ಕದ ಕೀಲಾರ ಗ್ರಾಮದ ಸರ್ಕಾರಿ ಶಾಲೆ ಮತ್ತು ಇತರ ಶಾಲೆಗಳಿಗೆ ದಾಖಲಿಸಿದ್ದಾರೆ. ಈ ವಿಷಯ ಇನ್ನೂ ಚರ್ಚೆಯಲ್ಲಿದ್ದು, ಸ್ಥಳೀಯ ಆಡಳಿತ ಹಸ್ತಕ್ಷೇಪ ಮಾಡುವ ನಿರೀಕ್ಷೆಯಿದೆ.

RELATED ARTICLES
- Advertisment -
Google search engine

Most Popular