ಮಂಡ್ಯ: SCSPTSP ಅನುದಾನಕ್ಕೆ ಕಾಂಗ್ರೆಸ್ ಸರ್ಕಾರ ಕನ್ನ ಹಾಕಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ಕಿವಿ ಮೇಲೆ ಹೂ ಇಟ್ಟುಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರ ಕಿವಿಯಲ್ಲಿ ಹೂವಿಟ್ಟ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
11 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದ್ದಾರೆ.
ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.