Friday, April 11, 2025
Google search engine

Homeರಾಜ್ಯಮಂಡ್ಯ: ತರಗತಿ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ ಉಪನ್ಯಾಸಕನಿಗೆ ಲಾಂಗ್ ತೋರಿಸಿದ ವಿದ್ಯಾರ್ಥಿ

ಮಂಡ್ಯ: ತರಗತಿ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ ಉಪನ್ಯಾಸಕನಿಗೆ ಲಾಂಗ್ ತೋರಿಸಿದ ವಿದ್ಯಾರ್ಥಿ

ಮಂಡ್ಯ: ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ ಉಪನ್ಯಾಸಕನಿಗೆ ವಿದ್ಯಾರ್ಥಿಯೊಬ್ಬ ಲಾಂಗ್ ತೋರಿಸಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರ. ಡಿಪ್ಲೊಮೋ ಕಾಲೇಜಿನಲ್ಲಿ ನಡೆದಿದೆ.

ಅವರೇಗೆರೆ ಗ್ರಾಮದ ಉದಯ್ ಗೌಡ (18) ಲಾಂಗ್ ತೋರಿಸಿದ ವಿದ್ಯಾರ್ಥಿ.

ಬಿ.ಜಿ.ನಗರದ ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ವಿದ್ಯಾರ್ಥಿ ಉದಯ್ ಗೌಡ ತರಗತಿಗೆ ಬರುತ್ತಿಲ್ಲವೆಂದು ಉಪನ್ಯಾಸಕ ಚಂದನ್  ಪೋಷಕರಿಗೆ ದೂರು ನೀಡಿದ್ದರು.

ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿ ಲಾಂಗ್ ಹಿಡಿದು  ಕಾಲೇಜಿಗೆ ಬಂದು ಬೆದರಿಕೆ ಹಾಕಿದ್ದಾನೆ.

ಈ ಘಟನೆಯ ವಿಡಿಯೋವನ್ನು ವಿದ್ಯಾರ್ಥಿಗಳು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಪ್ರಕರಣ ಸಂಬಂಧ ಉಪನ್ಯಾಸಕ ಚಂದನ್ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಳಿಕ ತನ್ನ ತಪ್ಪಿನ ಅರಿವಾಗಿ ವಿದ್ಯಾರ್ಥಿ ಉದಯ್​ ಗೌಡ, ಪೋಷಕರೊಂದಿಗೆ ಬಂದು ಉಪನ್ಯಾಸಕರ ಬಳಿ ಕ್ಷಮೆಯಾಚಿಸಿದ್ದಾನೆ.

RELATED ARTICLES
- Advertisment -
Google search engine

Most Popular