ಮಂಡ್ಯ: ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಆಲಂಬಾಡಿ ಕಾವಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಶ್ವನಾಥ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸುಮಾರು 1.35 ಎಕರೆಯಲ್ಲಿ ಹಾಕಲಾಗಿದ್ದ 40ಕ್ಕೂ ಹೆಚ್ಚು ಟನ್ ಕಬ್ಬು ನಾಶವಾಗಿದ್ದು, ರೈತನ ಕೈಗೆ ಬಂದಿದ್ದ ಫಸಲು ಬೆಂಕಿಗೆ ಆಹುತಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬೆಳೆ ಕಳೆದುಕೊಂಡು ರೈತ ಕಂಗಾಲಾಗಿದ್ದು, ಪರಿಹಾರಕ್ಕಾಗಿ ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಿದ್ದಾನೆ.