Sunday, April 20, 2025
Google search engine

Homeರಾಜ್ಯಸುದ್ದಿಜಾಲಮಂಡ್ಯ: ಮೈತ್ರಿ ಅಭ್ಯರ್ಥಿ ಪುಟ್ಟರಾಜು ಬಹುತೇಕ ಖಚಿತ?

ಮಂಡ್ಯ: ಮೈತ್ರಿ ಅಭ್ಯರ್ಥಿ ಪುಟ್ಟರಾಜು ಬಹುತೇಕ ಖಚಿತ?

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ನಾಯಕ ಎಚ್.ಡಿ. ದೇವೇಗೌಡ ಸ್ಪಷ್ಟ ಪಡಿಸಿದ ಬೆನ್ನಲ್ಲೆ, ಸಿ.ಎಸ್.ಟ್ಟರಾಜು ಮೈತ್ರಿ ಅಭ್ಯರ್ಥಿಯಾಗುವುದು ಖಚಿತವಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಸೋಮವಾರವೇ ಪಾಂಡವಪುರದಲ್ಲಿ ಮಾತನಾಡಿ ತಾವು ಸಹ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ವರಿಷ್ಠ ನಾಯಕ ಎಚ್.ಡಿ. ದೇವೇಗೌಡ ಅವರು, ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, `ಮಂಡ್ಯದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಚರ್ಚೆ ನಡೆಸಿದರು. ನಾನೇ ನಿಲ್ಲಬೇಕು ಕುಮಾರಸ್ವಾಮಿ ಅಥವಾ ನಿಖಿಲ್ ಇಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದವರು ಅಪೇಕ್ಷಿಸಿದರು. ನಾನು ಮತ್ತು ನಿಖಿಲ್ ನಿಲ್ಲುವುದಿಲ್ಲ ಎಂದು ಹೇಳಿದ್ದೇವೆ ಎಂದರು.

ಕುಮಾರಸ್ವಾಮಿ ಶಾಸಕಾಂಗ ಪಕ್ಷದ ನಾಯಕರಾಗಿದ್ದರೆ, ಇಲ್ಲಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಬೇಕಾಗಿದೆ. ಹೀಗಾಗಿ, ಲೋಕಕ್ಕೆ ಹೋಗುವೆ ಎಂದು ಅವರು ಹೇಳಿಲ್ಲ, ಹೇಳುವುದೂ ಇಲ್ಲ. ಅವರ ಸ್ಪರ್ಧೆಯ ಬಗ್ಗೆ ಊಹಾಪೋಹ ಸೃಷ್ಟಿಸಲಾಗಿದೆ. ಇರುವ ವಾಸ್ತವಾಂಶ ಇದು ಎಂದರು. ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸುತ್ತೇವೆ. ಅಭ್ಯರ್ಥಿಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಮೈತ್ರಿಕೂಟದ ನಾಯಕರಿಗೆ ವಿಷಯ ತಿಳಿಸುತ್ತೇವೆ. ಈ ಅಭ್ಯರ್ಥಿ ಆಯ್ಕೆಯ ತೀರ್ಮಾನವನ್ನು ಕುಮಾರಸ್ವಾಮಿ ಅವರಿಗೆ ನೀಡಿದ್ದಾರೆ ಎಂದು ಹೇಳಿದರು.

ಶಿಕ್ಷಕರ ಕ್ಷೇತ್ರಕ್ಕೆ ಕೆ.ಟಿ.ಶ್ರೀಕಂಠೇಗೌಡ ಹಾಗೂ ವಿವೇಕ್ ಅವರ ಹೆಸರಿವೆ. ಇಬ್ಬರಲ್ಲಿ ಯಾರಿಗೆ ಟಿಕೆಟ್ ಎಂಬ ನಿರ್ಧಾರವನ್ನು ಕುಮಾರಸ್ವಾಮಿಗೇ ಬಿಡುತ್ತೇನೆ. ಅವರು ಏನು ಹೇಳುತ್ತಾರೋ ಅದರಂತೆ ಇಬ್ಬರೂ ನಡೆದುಕೊಳ್ಳಬೇಕು ಎಂದು ದೇವೇಗೌಡ ಹೇಳಿದರು. ಶಾಸಕರಾದ ಜಿ.ಟಿ. ದೇವೇಗೌಡ, ಮಂಜುನಾಥ್, ಮಂಜೇಗೌಡ, ಮಾಜಿ ಶಾಸಕರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಸುರೇಶ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ. ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular