ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಮತಗಟ್ಟೆ ಬಳಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವ ಘಟನೆ ಮಂಡ್ಯದ ಮದ್ದೂರಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಊಟ ಮಾಡುತ್ತಿದ್ದ ಕಾರ್ಯಕರ್ತರಿಗೆ ಅವಾಚ್ಯ ಶಬ್ದಗಳಿಂದ ಪೊಲೀಸರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸ್ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಇಬ್ಬರ ನಡುವಿನ ಜಟಾಪಟಿಗೆ ಗ್ರಾಮದಲ್ಲಿ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಹಿರಿಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿದೆ.