ಮದ್ದೂರು:ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣ ಸಜ್ಜುಗೊಂಡಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮಾವೇಶದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಉದಯ್ , ಡಿಸಿ ಡಾ.ಕುಮಾರ, ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಭಾಗಿಯಾಗಿದ್ದಾರೆ.
ವಿವಿಧ ಇಲಾಖೆಗಳಿಂದ ಪಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸ್ಥಳದಲ್ಲಿ ನೀಡಲು ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಕಂದಾಯ ಇಲಾಖೆ, ಸಿದ್ಧತೆ ಮಾಡಿಕೊಳ್ಳಲಾಗಿದ್ದು ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮ ಸ್ಥಳದಲ್ಲೇ ಜರುಗುತ್ತಿದೆ.
ದೀಪ ಬೆಳಗುವ ಮೂಲಕ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಶಾಸಕ ಕದಲೂರು ಉದಯ್ ಮಾತನಾಡಿ , ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ನಮ್ಮ ತಾಲೂಕಿನ 80ರಷು ಮಹಿಳೆಯರು ಯೋಜನೆ ಪಡೆದಿದ್ದಾರೆ.
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮದ್ದೂರು ತಾಲೂಕಿಗೆ 275 ಕೋಟಿ ರೂಗಳ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ.
ಕೆಮ್ಮಣ್ಣು ನಾಲೆ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ 25 ಕೋಟಿ, ಪಿಡಬ್ಲ್ಯೂ ಇಲಾಖೆ 30 ಕೋಟಿ, ಇನ್ನು ಹಲವು ಅಭಿವೃದ್ಧಿಗಳಿಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರವರು ಅನುದಾನ ಬಿಡುಗಡೆ ಮಾಡಿದ್ದಾರೆ.
ಇದಕ್ಕೆಲ್ಲ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದರು.
ಕೆಲವರು ಸುಳ್ಳು ಹೇಳೋ ಮೂಲಕ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೆಸರು ಹೇಳದೆ ಮಾಜಿ ಸಚಿವ ಡಿಸಿ ತಮ್ಮಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.