ಮಂಡ್ಯ: ಜಿಲ್ಲಾಡಳಿತ, ಜಿ.ಪಂ.ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಹಿನ್ನಲೆ ಡೆಂಗ್ಯೂ ನಿಯಂತ್ರಣ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಮಂಡ್ಯದ ಸಂಜಯ್ ವೃತ್ತದಲ್ಲಿ ಜಾಗೃತಿ ಜಾಥಾಗೆ ಶಾಸಕ ಗಣಿಗ ರವಿಕುಮಾರ್ ಚಾಲನೆ ನೀಡಿದರು.
ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ಸಾಗಿತು.
ಈ ವೇಳೆ ಮಾತನಾಡಿದ ಶಾಸಕ ಗಣಿಗ ರವಿಕುಮಾರ್, ಡೆಂಗ್ಯೂ ನಿಯಂತ್ರಣ ಬಗ್ಗೆ ಎಲ್ಲರು ಸಹ ಜಾಗೃತರಾಗಬೇಕು. ಮಂಡ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೂನ್ಯ ಇದೆ, ಅಧಿಕಾರಿಗಳು ಸೂಕ್ತ ಕ್ರಮವಹಿಸಿದ್ದಾರೆ. ನಮ್ಮ ಮನೆಗಳ ಸುತ್ತಮುತ್ತಲಿನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಡಿಎಚ್ ಓ ಡಾ ಮೋಹನ್ ಸೇರಿ ಹಲವರು ಭಾಗಿಯಾಗಿದ್ದರು.