ಮಂಡ್ಯ: ಅಧ್ಯಾಪನ ವಿಜ್ಞಾನೋತ್ಸವದ ಅಂಗವಾಗಿ ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ‘ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆ ಏರ್ಪಡಿಸಲಾಗಿದ್ದು, ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲಾ ಶಿಕ್ಷಣ ಇಲಾಖೆ,ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಜೇಷನ್ ಹಾಗೂ ಅಧ್ಯಾಪನ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳಿಗೆ ವಿಜ್ಞಾನ ತರಂಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ವಿವಿಧ ರೀತಿಯಲ್ಲಿ ಮಕ್ಕಳು ವಿಜ್ಞಾನ ತರಂಗ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.
ನಂತರ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಓದುವ ವಯಸ್ಸಿನಲ್ಲೇ ಮಕ್ಕಳಿಗೆ ಒಳ್ಳೆಯ ಆಯ್ಕೆಯ ವಿದ್ಯಾಬ್ಯಾಸ ನೀಡಿ. ಹಿಂದಿನ ಕಾಲದಲ್ಲಿ ವಿದ್ಯಾಬ್ಯಾಸಕ್ಕೆ ಹೆಚ್ಚಿನ ಆಯ್ಕೆಯ ವಿಷಯಗಳು ಸಿಗುತ್ತಿರಲಿಲ್ಲ. ಈಗಿನ ದಿನಗಳಲ್ಲಿ ಮಕ್ಕಳಿಗೆ ಬಹಳಷ್ಟು ಆಯ್ಕೆಗಳು ಇವೇ. ಆದ್ದರಿಂದ ಒಳ್ಳೆಯ ಆಯ್ಕೆ ಮಾಡಿಕೊಂಡು ವಿದ್ಯಾಬ್ಯಾಸ ಮಾಡಿ. ಚಿಕ್ಕ ವಯಸ್ಸಿನಲ್ಲಿ ಮಕ್ಕಳ ಗ್ರಹಿಕೆಯ ಶಕ್ತಿ ಹೆಚ್ಚಿರುತ್ತದೆ. ಮಕ್ಕಳಿಗೆ ಜ್ಞಾನ ಗಳಿಸುವ ದಾರಿಯನ್ನು ಶಿಕ್ಷಕರು ಮಾಡಿಕೊಡಬೇಕು. ರಾಜ್ಯದಲ್ಲಿ ಸುಮಾರು 60000 ಸರ್ಕಾರಿ ಶಾಲೆಗಳಿವೆ. 56 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ 4 ವರ್ಷಗಳಲ್ಲಿ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ದಾಖಲಾಗಬೇಕು. ಈ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲು, ಮೊಟ್ಟೆ, ಬಿಸಿಯೂಟ ಸೇರಿದಂತೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ 4 ವರ್ಷಗಳಲ್ಲಿ 55 ಲಕ್ಷ ಮಕ್ಕಳ ದಾಖಲಾತಿ ಮಾಡಲು ಗುರಿ ಹೊಂದಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಉತ್ತಮ ಬಿ.ಇ.ಒ ಮಹಾದೇವ, ಉತ್ತಮ ಶಾಲೆ ಕಾರ್ಮೆಲ್ ಕಾನ್ವೆಂಟ್, ಉತ್ತಮ ವಿಜ್ಞಾನ ಶಿಕ್ಷಕ ಮೂರ್ತಿ ಪಿ.ವಿ.ಎನ್, ವಿಜ್ಞಾನ ವಸ್ತು ಪ್ರದರ್ಶನ ದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ ಉದಯ, ಸಿಇಓ ಶೇಖ್ ತನ್ವೀರ್ ಆಸೀಫ್, ಇಸ್ರೋ ಹಿರಿಯ ವಿಜ್ಞಾನಿ ಪಿ.ವಿ ಎನ್ ಮೂರ್ತಿ ಸೇರಿ ಇತರರು ಭಾಗಿಯಾಗಿದ್ದರು.