ಮಂಡ್ಯ:ಮಂಡ್ಯದ ಲಕ್ಷ್ಮಿ ಜನಾರ್ಧನ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿತ್ತು . ಸಚಿವ ಸಚಿವ ಎನ್.ಚಲುವರಾಯಸ್ವಾಮಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ನಂತರ ಮಾತನಾಡಿ, ಅತ್ಯಂತ ಸಂತೋಷದ ಕಾರ್ಯಕ್ರಮ ಇದು. ಮಕ್ಕಳು ಓದಿನ ಕಡೆ ಎಷ್ಟು ಗಮನಹರಿಸುತ್ತಾರೋ, ಅಷ್ಟೇ ಪ್ರತಿಭಾ ಕಾರಂಜಿಯಲ್ಲಿ ಭಾಗಿಯಾಗಿ ರಾಜ್ಯಮಟ್ಟಕ್ಕೆ ಮಕ್ಕಳು ಆಯ್ಕೆ ಆಗ್ತಾರೆ ಎಂದರು.
ಅಲ್ಲದೆ ಮಕ್ಕಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಅಷ್ಟೇ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಅವಶ್ಯಕ ಎಂದರು. ಆದ್ದರಿಂದ ಎಲ್ಲಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಬೇಕು ಜೊತೆಗೆ ಮಕ್ಕಳಿಗೆ ಅವಕಾಶ ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಮಕ್ಕಳಿಗೆ ಈ ಸಂದರ್ಭದಲ್ಲಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಎಸ್ಪಿ ಎನ್.ಯತೀಶ್ ಸೇರಿ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.