ಮಂಡ್ಯ : ರಾಜ್ಯ ಅಷ್ಟೆ ಅಲ್ಲದೆ ಇಡೀ ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಂಡ್ಯ ಜಿಲ್ಲೆಯಲ್ಲಿ ನಡೆದಂತಹ ಹೆಣ್ಣು ಭ್ರೂಣಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರಿಂದ ಮತ್ತೆ ಮೂವರು ಆರೋಪಿಗಳ ಬಂಧನವಾಗಿದೆ.

ಬಂಧಿತರನ್ನು ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಎಂದು ತಿಳಿದುಬಂದಿದ್ದೆ. ಸದ್ಯ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಸ್ಕ್ಯಾನಿಂಗ್ ಯಂತ್ರ, ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮಂಡ್ಯ ಜಿಲ್ಲೆಯ ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಇದುವರೆಗೂ ೧೨ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ೬- ೭ ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ.




