ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರ 74ನೇ ಜನ್ಮದಿನ ಅಂಗವಾಗಿ ಮಂಡ್ಯದಲ್ಲಿ ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟು ಹಬ್ಬ ಆಚರಿಸಲಾಯಿತು. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 150ಕ್ಕೂ ಹೆಚ್ಚು ರೋಗಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು. ನೂರಕ್ಕೂ ಹೆಚ್ಚು ಯುವಕ ಯುವತಿಯರಿಂದ ರಕ್ತದಾನ ಮಾಡಲಾಯಿತು.

ರಾಜ್ಯ ವೈದ್ಯಕೀಯ ಪ್ರಕೋಷ್ಟದ ಸಹ ಸಂಚಾಲಕ ಡಾ.ಸದಾನಂದ ನೇತೃತ್ವದಲ್ಲಿ ಶಿಬಿರ ನಡೆಯಿತು . ಇದೇ ವೇಳೆ ಬಿಜೆಪಿ ಮುಖಂಡ ಅಶೋಕ್ ಜಯರಾಮ್, ಪಣೇಶ್, ಸಿಟಿ ಮಂಜುನಾಥ್, ಆರಾಧ್ಯ ಹಾಗೂ ಇತರರು ಭಾಗಿಯಾಗಿದ್ದರು.