ಮಂಡ್ಯ: ಹಾಡು ಹಗಲೇ ರೈತನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಅಡಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರಕಾಶ್(40) ಎಂಬಾತ ಗಾಯಗೊಂಡ ರೈತ.
ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ್ದು, ರೈತ ಗಂಭೀರ ಗಾಯಗೊಂಡಿದ್ದಾನೆ.
ಗಾಯಾಳು ಪ್ರಕಾಶ್’ರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.