ಮಂಡ್ಯ: ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿ ಜನ್ಮದಿನ ಆಚರಿಸಲಾಗಿದ್ದು, ಶಾಸಕ ಗಣಿಗ ರವಿಕುಮಾರ್ ಕೇಕ್ ಕಟ್ ಮಾಡಿ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿದ್ದಾರೆ. ಬಳಿಕ ಸಾರ್ವಜನಿಕರಿಗೆ ಬಿರಿಯಾನಿ ವಿತರಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಅವರು, ಬರಗಾಲ ಹಾಗೂ ಕಾವೇರಿ ನೀರಿನ ಸಮಸ್ಯೆ ಇರುವುದರಿಂದ ವಿಜೃಂಭಣೆಯಿಂದ ಹುಟ್ಟುಹಬ್ಬ ಆಚರಿಸಿಲ್ಲ. ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡುವುದು ಉತ್ತಮ. ಮಕ್ಕಳಿಗೆ ಬುಕ್ ಕೊಟ್ಟರೆ ಅವರ ಜೀವನ ರೂಪಿಸಿಕೊಳ್ತಾರೆ. ಹಾಗಾಗಿ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಅವರಿಗೆ ನಾನು ಋಣಿಯಾಗಿರ್ತೆನೆ ಎಂದು ಹೇಳಿದರು.
ಆಚರಣೆಯಲ್ಲಿ ಮಂಜು, ಸೇರಿದಂತೆ ಹಲವರು ಭಾಗಿಯಾಗಿದ್ದರು.