ಮಂಡ್ಯ: ಸೊಸೆ ಸಾವಿನಿಂದ ನೊಂದು ಅತ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದ ನಿನ್ನೆ ಸಂಜೆ ಸುಶೀಲಾ(೪೨) ಮೃತಪಟ್ಟರೆ, ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹುಚ್ಚಮ್ಮ(೭೫) ಸಾವನ್ನಪ್ಪಿದ್ದಾರೆ. ಅತ್ತೆ-ಸೊಸೆ ಸಾವಿನಿಂದ ಕುಟುಂಬ ದುಃಖದಲ್ಲಿ ಮುಳುಗಿದ್ದು, ಅತ್ತೆ-ಸೊಸೆ ಸಾವಿನಿಂದ ಇಡೀ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಒಂದೇ ಕಡೆ ಅಂತ್ಯಕ್ರಿಯೆ ನಡೆಸಿದ ಕುಟುಂಬಸ್ಥರು.
