ಮಂಡ್ಯ: ಮೈತ್ರಿ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಮೂರನೇ ದಿನದ ಪಾದಯಾತ್ರೆ ಆರಂಭಗೊಂಡಿದ್ದು, ಮಂಡ್ಯದ ತೂಬಿನಕೆರೆಯಿಂದ ಈ ದಿನದ ಪಾದಯಾತ್ರೆ ಆರಂಭಗೊಳ್ಳಲಿದೆ.
ತೂಬಿನಕೆರೆಯಿಂದ ಶ್ರೀರಂಗಪಟ್ಟಣದವರೆಗೆ 20 km ಸಾಗಲಿರುವ ಪಾದಯಾತ್ರೆ. ಇಂದಿನ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಎರಡು ಪಕ್ಷದ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.