ಮಂಡ್ಯ: ಚುಂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಗೆ ಆಗಮಿಸಿದ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಮತದಾನ ಮಾಡಿದ್ದಾರೆ.

ನಿರ್ಮಲಾನಂದನಾಥ ಸ್ವಾಮೀಜಿ ಜೊತೆಗೂಡಿ ಶ್ರೀ ಕ್ಷೇತ್ರದ ನಾಲ್ಕು ಜನ ಮಠಾಧೀಶರಾದ ನಾರಾಯಣನಾಥಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಪುರುಷೋತ್ತಮಾನಂದನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿಗಳು ಜೊತೆಗೂಡಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ.