ಮಂಡ್ಯ: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ತಜ್ಞ ವೈದ್ಯರಿಲ್ಲದೇ ನಡೆಸುತ್ತಿದ್ದ ಸ್ಕ್ಯಾನಿಂಗ್ ಸೆಂಟರ್ ಗೆ ಬೀಗ ಜಡಿದಿದ್ದಾರೆ.

ಕೆ. ಆರ್.ಪೇಟೆ ಪಟ್ಟಣದ ನಾವಿ ಸ್ಕ್ಯಾನಿಂಗ್ ಸೆಂಟರ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟಸ್ವಾಮಿ ಹಾಗೂ ಪಾಂಡವಪುರ ಎಸಿ ನಂದೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.