ಮಂಡ್ಯ: ಕುಡುಕ ಯುವಕನೊಬ್ಬ ವೃದ್ಧೆ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ಶನಿವಾರ ನಡೆದಿದೆ.
ಕೆಂಪಮ್ಮ (80) ಹತ್ಯೆಯಾದ ಮಹಿಳೆ. ಮೃತಳ ಮೈದುನನ ಮಗ ಹರೀಶ್ ಎಂಬಾತ ಕೊಲೆ ಮಾಡಿ ನಗರದ ಸೆಂಟ್ರಲ್ ಠಾಣೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.
ಗಂಡನನ್ನು ಕಳೆದುಕೊಂಡಿದ್ದ ಮಹಿಳೆ ಮೈದುನ ರಾಮಕೃಷ್ಣ ಹಾಗೂ ಆತನ ಮಗನಾದ ಹರೀಶನ ಜೊತೆ ವಾಸವಾಗಿದ್ದರು. ಕುಡಿದ ಮತ್ತಿನಲ್ಲಿ ನಿತ್ಯ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡುತ್ತಿದ್ದ ಆರೋಪಿ ಶನಿವಾರ ಮಹಿಳೆಯ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.