ಮಂಡ್ಯ: ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಡ್ಯದ ಸಂಜಯ ವೃತ್ತದಲ್ಲಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ಕೆಲ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ರಾಜ್ಯ ಸರ್ಕಾರ, ಕಾವೇರಿ ಪ್ರಾಧಿಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಆದ್ದರಿಂದ ಬೆಂಗಳೂರಿನವರು ಸಹ ಕಾವೇರಿ ಹೋರಾಟಕ್ಕೆ ಬರುವಂತೆ ಆಗ್ರಹಿಸಿದರು. ಜೊತೆಗೆ ಚಲನಚಿತ್ರ ನಟರು ಸಹ ರೈತರಿಗೆ ಬೆಂಬಲ ನೀಡುವಂತೆ ಒತ್ತಾಯಿಸಿದರು.