ಮಂಡ್ಯ: ಮಂಡ್ಯದ ಹಾಲಹಳ್ಳಿ ಸ್ಲಂ ಬೋರ್ಡ್ ಬಡವಾಣೆಯಲ್ಲಿರುವ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗ ಮಸೀದಿ ಕಟ್ಟಲು ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ, ಮಸೀದಿ ರಸ್ತೆ ತೆರವು ಗೊಳಿಸುವಂತೆ ಆಗ್ರಹಿಸಿ ಸ್ಲಂ ನಿವಾಸಿಗಳು ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿ ವರೆಗೆ ಮೆರವಣಿಗೆ ನಡೆಸಿದ ಭಜರಂಗ ಸೇನೆ ಹಾಗೂ ಹಾಲಹಳ್ಳಿ ಸ್ಲಂ ಬೋರ್ಡ್ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದ್ದಾರೆ.
ಭಜರಂಗ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಸಲಾಗಿದ್ದು, ಹಿಂದೂ ದೇವಸ್ಥಾನದ ಎದರು ಅಕ್ರಮವಾಗಿ ರಸ್ತೆ ನಿರ್ಮಾಣಮಾಡಿದ್ದಾರೆ. ಮಸೀದಿ ಕಟ್ಟಲು ಖಾಸಗಿ ಜಾಗ ಇದೆ. ಅಲ್ಲೆ ರಸ್ತೆ ನಿರ್ಮಾಣ ಮಾಡಬೇಕು. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿರುವುದು ಸರಿಯಲ್ಲ. ಇದು ಯುವಕರ ನಡುವೆ ಗಲಾಟೆ ಉಂಟಾಗುವ ಸಾಧ್ಯತೆ ಇದೆ. ತಕ್ಷಣವೇ ಜಿಲ್ಲಾಧಿಕಾರಿ ಕ್ರಮವಹಿಸಿ ಅಕ್ರಮ ರಸ್ತೆ ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.