ಮಂಡ್ಯ: ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತುರ್ತಾಗಿ ಬರ ಪರಿಹಾರ ವಿತರಿಸಿ ಉದ್ಯೋಗ ಖಾತರಿ ಕೆಲಸ ನೀಡಿ. ಕೇಂದ್ರದ ಕಡೆ ಬೆಟ್ಟು ಮಾಡದೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿ. ಉದ್ಯೋಗ ಖಾತರಿ ಕೆಲಸ 100 ರಿಂದ 200 ದಿನಕ್ಕೆ ಹೆಚ್ಚಿಸಬೇಕು. 484 ರೂ ಕನಿಷ್ಠ ಕೂಲಿ ನೀಡಿ ಕೂಲಿಕಾರರ ರಕ್ಷಣೆ ಮಾಡಬೇಕು. ಪಡಿತರ ಅಕ್ಕಿ ಬಿಡುಗಡೆ ಮಾಡಿ ಜನರ ರಕ್ಷಣೆ ಮಾಡಿ. ರಾಜಕಾರಣ ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹನುಮೇಶ್, ಮದು ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು.