ಮಂಡ್ಯ: ಮಂಡ್ಯ ತಾಲ್ಲೂಕಿನ ಪಿ ಎಲ್ ಡಿ ಬ್ಯಾಂಕ್ ನಲ್ಲಿ ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಸರಸ್ವತಿ ಕೆ.ಶೇಖರ್ ಅವಿರೋಧವಾಗಿ ಆಯ್ಕೆಯಾದರು. 15 ಮಂದಿ ನಿರ್ದೇಶಕರಿರುವ ಪಿಎಲ್‌ಡಿ ಬ್ಯಾಂಕ್‌ನಲ್ಲಿ
ಹಿಂದಿನ ಉಪಾಧ್ಯಕ್ಷ ಪ್ರಕಾಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.
ಇಂದು ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು ಸೇರಿ ಉಪಾಧ್ಯಕ್ಷರಾಗಿ ಸರಸ್ವತಿ ಕೆ.ಶೇಖರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಚುನಾವಣಾ ಅಧಿಕಾರಿ ತ್ಯಾಗರಾಜ ಪ್ರಸಾದ್ ಘೋಷಣೆ ಮಾಡಿದರು.
ನಂತರ ಉಪಾಧ್ಯಕ್ಷೆ ಸರಸ್ವತಿ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲರ ಮಾರ್ಗದರ್ಶನದೊಂದಿಗೆ ಬ್ಯಾಂಕಿನ ಅಭಿವೃದ್ಧಿಗಾಗಿ ಎಲ್ಲರ ಜೊತೆ ಸೇರಿ ಕೆಲಸ ಮಾಡುತ್ತೇನೆ ಎಂದರು.
ಬಳಿಕ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬೇಲೂರು ಸೋಮಶೇಖರ್ ಮಾತನಾಡಿ, ಎಲ್ಲಾ ನಿರ್ದೇಶಕರು ಒಟ್ಟಿಗೆ ಸೇರಿ ಸರಸ್ವತಿ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು.
ಮುಂದಿನ ದಿನಗಳಲ್ಲಿ ಬ್ಯಾಂಕಿನ ಅಭಿವೃದ್ಧಿಗೆ ಅಧ್ಯಕ್ಷರು ಹಾಗೂ ನಿರ್ದೇಶಕರ ಜೊತೆ ಕೈಜೋಡಿಸಿ ಹಗಲಿರುಳು ಶ್ರಮಿಸಲಿ ಎಂದು ಶುಭ ಹಾರೈಸಿದರು. ಇದೇ ವೇಳೆ ನೂತನ ಉಪಾಧ್ಯಕ್ಷರನ್ನ ನಿರ್ದೇಶಕರು ಸನ್ಮಾನಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೆಚ್.ಸಿ.ಶಿವಲಿಂಗೇಗೌಡ ಸೇರಿ ನಿರ್ದೇಶಕರು ಭಾಗಿಯಾಗಿದ್ದರು.