ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡು ಮತ್ತಿಬ್ಬರು ಅಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲೂಕಿನ ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡ್ತಿದ್ದ ವೇಳೆ ಏಕಾಏಕಿ ಕಾಡು ಹಂದಿ ದಾಳಿ ಮಾಡಿದ್ದು, ರಮೇಶ ಹಾಗು ಶಿವಲಿಂಗೇಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈತರನ್ನು ರಕ್ಷಣೆ ಮಾಡಲು ಹೋದವರ ಮೇಲೂ ಕಾಡು ಹಂದಿ ದಾಳಿ ನಡೆಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಹೆಚ್ಚಿನ ಜನರು ಬರುತ್ತಿದ್ದಂತೆ ಕಾಡು ಹಂದಿ ಸ್ಥಳದಿದ ಓಡಿಹೋಗಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರು ರೈತರನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ರೈತರಿಗೆ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.