ಮಂಗಳೂರು (ದಕ್ಷಿಣ ಕನ್ನಡ): ವಿದ್ಯಾರ್ಥಿಗಳ ಗುಂಪೊಂದು ನಡು ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ.
ಅಲೋಶಿಯಸ್ ಕಾಲೇಜು ಗೇಟ್ ಎದುರಿನ ರಸ್ತೆಯಲ್ಲೇ ವಿದ್ಯಾರ್ಥಿಗಳು ಕಾಲೇಜು ಯೂನಿಫಾರಂನಲ್ಲೇ ಹೊಡೆದಾಡಿಕೊಂಡಿದ್ದಾರೆ.
ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಹೊಡೆದಾಟ ನಡೆದಿದೆ. ತೀವ್ರವಾಗಿ ಹೊಡೆದಾಟ ನಡೀತಿದ್ದ ಕಾರಣ ಉಳಿದ ವಿದ್ಯಾರ್ಥಿಗಳು, ಸಾರ್ವಜನಿಕರು ಮೂಕಪ್ರೇಕ್ಷಕರಾಗಿ ನಿಂತು ನೋಡ್ತಿದ್ರು. ಇನ್ನು ಈ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗ್ತಿದೆ.