ಮಂಗಳೂರು (ದಕ್ಷಿಣ ಕನ್ನಡ): ಕೋಮು ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡರ ವಿರುದ್ಧ ಮಂಗಳೂರಲ್ಲಿ ಪೊಲೀಸ್ ಕಮಿಷನರ್ ಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ದೂರು ಸಲ್ಲಿಸಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್, ಸಿ.ಟಿ ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ನಿಯೋಗದಿಂದ ಶಾಹುಲ್ ಹಮೀದ್ ನೇತೃತ್ವದಲ್ಲಿ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ. ಬಿಜೆಪಿ ಮುಖಂಡರಿಂದ ಕೋಮುಗಲಭೆಗೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ.
ವಕ್ಫ್ ಬಗ್ಗೆ ತಪ್ಪು ಮಾಹಿತಿ ರವಾನೆ ಮಾಡಲಾಗಿದೆ. ಸಿ.ಟಿ.ರವಿ, ಯತ್ನಾಳ್ ಶಾಸಕತ್ವವನ್ನೇ ರದ್ದು ಮಾಡಿ ಎಂದು ಪಾಂಡೇಶ್ವರದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಮನವಿ ಮಾಡಿದ್ದಾರೆ.