ಮಂಗಳೂರು(ದಕ್ಷಿಣ ಕನ್ನಡ): ಬೈಕಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಲಾರಿಯಡಿಗೆ ಬಿದ್ದು ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಸೋನು (19) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಸಹಸವಾರ ಪ್ರಸಾದ್ ಅವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ತುರ್ತು ಚಿಕಿತ್ಸಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋನು ಅವರು ಮೂಲತಃ ಉತ್ತರಪ್ರದೇಶದವರಾದರೂ ಪ್ರಸ್ತುತ ಉಡುಪಿಯಲ್ಲಿ ವಾಸವಾಗಿದ್ದಾರೆ. ಪ್ರಸಾದ್ ಕಾರ್ಕಳ ನಿವಾಸಿಯಾಗಿದ್ದಾರೆ.
ಸೋನು ಹಾಗೂ ಪ್ರಸಾದ್ ಅವರು ನೆಲ್ಯಾಡಿಯಲ್ಲಿರುವ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರು ಮಂಗಳೂರಿಗೆ ತೆರಳುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಜಂಕ್ಷನ್ ನಲ್ಲಿ ಹೆದ್ದಾರಿಯಲ್ಲಿ ಅಡ್ಡಲಾಗಿ ಇರಿಸಲಾದ ಬ್ಯಾರಿಕೇಡ್ ನ್ನು ಗಮನಿಸದ ಬೈಕ್ ಸವಾರ ಕಂಟೇನರ್ ಲಾರಿಯೊಂದನ್ನು ಓವರ್ ಟೇಕ್ ಮಾಡುವ ರಭಸಕ್ಕೆ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಹಾಗು ಸಹಸವಾರ ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಅದೇ ಕಂಟೇನರ್ ಲಾರಿಯ ಚಕ್ರದಡಿಗೆ ಸಿಲುಕಿಕೊಂಡಿದ್ದಾರೆ.
ಇದರಲ್ಲಿ ಸೋನು ಸ್ಥಳದಲ್ಲಿಯೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿರುವ ಪ್ರಸಾದ್ ನನ್ನುಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನು ಅವರ ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿಪ್ರಕರಣ ದಾಖಲಿಸಿಕೊಂಡಿದ್ದಾರೆ.