ಮಂಗಳೂರು(ದಕ್ಷಿಣ ಕನ್ನಡ): ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಮಂಗಳೂರಿನ ನಾರಾಯಣ ಗುರು ವೃತ್ತದಲ್ಲಿ ಆಚರಿಸಲಾಯಿತು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾಗಿದ್ದರು
ನಾರಾಯಣ ಗುರು ಪ್ರತಿಮೆಗೆ ನಳಿನ್ ಕುಮಾರ್ ಕಟೀಲ್ ಮಾಲಾರ್ಪಣೆ ಮಾಡಿದರು. ಬಳಿಕ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಇದೇ ವೇಳೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸೇರಿ ನಾಯಕರು ಭಾಗಿಯಾಗಿದ್ದರು.