ಮಂಗಳೂರು (ದಕ್ಷಿಣ ಕನ್ನಡ): ಕಾರೊಂದು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ನಡೆದಿದೆ.
ಉಸ್ಮಾನ್, ಮೃತ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಉಸ್ಮಾನ್ ಅವರು ತನ್ನ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದು, ಸತ್ತಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ನೋಂದಾವಣೆಯಾಗದ ಕಾರೊಂದು ಏಕಾಏಕಿ ಅವರ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಈ ಸಂದರ್ಭ ಸ್ಕೂಟರ್ ನಲ್ಲಿ ಕುಳಿತಿದ್ದ ಉಸ್ಮಾನ್ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯಿಂದ ಕಾರು ಮತ್ತು ಬೈಕ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.