ಮಂಗಳೂರು (ದಕ್ಷಿಣ ಕನ್ನಡ):ಮಂಗಳೂರಿನ ಉಳ್ಳಾಲ ನೇತ್ರಾವತಿ ರೈಲ್ವೇ ನಿಲ್ದಾಣಗಳ ಮಧ್ಯೆ ಡೌನ್ ಲೈನ್‍ನಲ್ಲಿ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿರುವ ಬಗ್ಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮೃತರ ಚಹರೆ: ಎತ್ತರ ಸುಮಾರು 5.2 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಮುಖದ ಭಾಗ ಜಜ್ಜಿ ಹೋಗಿರುತ್ತದೆ. ಗಡ್ಡ ಬಿಟ್ಟಿರುತ್ತಾರೆ. ಸೊಂಟದಲ್ಲಿ ಉಡುದಾರೆ ಇರುತ್ತದೆ. ನೀಲಿ ಬಣ್ಣದ ಗೆರೆಯುಳ್ಳ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ಅಪರಿಚಿತ ಗಂಡಸಿನ ವಾರಸುದಾರರು ಪತ್ತೆಯಾಗಿದಲ್ಲಿ ಮಂಗಳೂರು ರೈಲ್ವೆ ಪೊಲಿಸ್ ಠಾಣೆ ದೂರವಾಣಿ ಸಂಖ್ಯೆ:0824-2220559 ಅಥವಾ ರೈಲ್ವೆ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ:080-22871291 ಪೊಲಿಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ:9480800470 ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.