ಮಂಗಳೂರು (ದಕ್ಷಿಣ ಕನ್ನಡ):ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ವತಿಯಿಂದ ನಡೆಯುವ ‘ಮಂಗಳೂರು ದಸರಾ ಮಹೋತ್ಸವ’ದ ಅಂಗವಾಗಿ ಇಂದು ಮಹಾಗಣಪತಿ, ಶ್ರೀ ಶಾರದಾ ದೇವಿ, ಹಾಗೂ ನವದುರ್ಗೆಯರ ವಿಗ್ರಹಗಳ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವದ ಉದ್ಘಾಟನೆಯನ್ನು ಕುದ್ರೊಳಿ ಕ್ಷೇತ್ರದ ಆಧುನೀಕರಣದ ರೂವಾರಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಂಜ ನೆರವೇರಿಸಿದರು.
ಶ್ರೀ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಹಾಗಣಪತಿಯೊಂದಿಗೆ ನವ ದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಠಾಪನೆ ನಡೆಯಿತು.
ಈ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್ ,ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್ ಶಶಿ ಧರ ಹೆಗ್ಡೆ,ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಉಪಾಧ್ಯಕ್ಷ ಊರ್ಮಿಳಾ ರಮೇಶ್ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ,ಹರಿಕೃಷ್ಣ ಬಂಟ್ವಾಳ, ರಾಧಾಕೃಷ್ಣ, ಚಿತ್ತರಂಜನ್ ಗರೋಡಿ, ರಮಾನಾಥ ಕಾಂದೂರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.