ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದು ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳಿದ್ದವು. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.