ಮಂಗಳೂರು(ದಕ್ಷಿಣ ಕನ್ನಡ): ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ.
ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ, ಮೃತರು.

ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿತಗೊಂಡು, ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ.
ಮನೆಯ ಅವಶೇಷಗಳ ಅಡಿಯಿಂದ ಮೃತದೇಹ ಹೊರಕ್ಕೆ ತೆಗೆಯಲಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.