Friday, April 18, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು:ಅನುಪಮ್ ಅಗರ್ ವಾಲ್ ಅಧ್ಯಕ್ಷತೆಯಲ್ಲಿ ದಲಿತರ ಕುಂದುಕೊರತೆ ಸಭೆ

ಮಂಗಳೂರು:ಅನುಪಮ್ ಅಗರ್ ವಾಲ್ ಅಧ್ಯಕ್ಷತೆಯಲ್ಲಿ ದಲಿತರ ಕುಂದುಕೊರತೆ ಸಭೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಪಾಂಡೇಶ್ವರದ ರೊಸಾರಿಯೊ ಚರ್ಚ್ ಆವರಣದ ಸಭಾಂಗಣದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅಧ್ಯಕ್ಷತೆಯಲ್ಲಿ ದಲಿತರ ಕುಂದುಕೊರತೆ ಸಭೆ ನಡೆಯಿತು. ಈ ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ದಲಿತ ಮುಖಂಡರು ಗಮನ ಸೆಳೆದರು. ದಲಿತ ಮುಖಂಡ ಎಸ್.ಪಿ. ಆನಂದ್ ಒಂದು ಪ್ರಕರಣದ ಬಗ್ಗೆ ಗಮನ ಸೆಳೆದರು.

ಅದೇನೆಂದರೆ ಪೌರ ಕಾರ್ಮಿಕರೊಬ್ಬರ 22 ವರ್ಷದ ಪುತ್ರ ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದು, ಕಾವೂರು ಠಾಣೆಯಲ್ಲಿ ದೂರು ನೀಡಲಾಗಿದೆ. ಆದರೆ ಇನ್ನೂ ಆತನ ಪತ್ತೆಯಾಗಿಲ್ಲ ಎಂದು ದೂರಿದರು. ಇನ್ನು ಸಾಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನ ಮಾಡುವುದು ಸೇರಿದಂತೆ ಕೋಮುಗಲಭೆಗೆ ಪೂರಕವಾದ ಅವಹೇಳನಕೇರಿ ಪೋಸ್ಟ್ ಹಾಕುವ ಬಗ್ಗೆ ಕಳೆದ ಸಭೆಯಲ್ಲಿ ದೂರು ನೀಡಲಾಗಿದ್ದರೂ ಕ್ರಮವಾಗಿಲ್ಲ ಎಂದು ದಲಿತ ನಾಯಕರೊಬ್ಬರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು ಈ ಬಗ್ಗೆ ಫೇಸ್‌ಬುಕ್ ಸಂಸ್ಥೆಯವರ ಜತೆ ಪತ್ರ ವ್ಯವಹಾರ ನಡೆಸಲಾಗಿದೆ ಎಂದರು.
ಉರ್ವಾಸ್ಟೋರ್‌ನಲ್ಲಿ ನಿರ್ಮಾಣವಾಗಿರುವ ದ.ಕ. ಜಿಲ್ಲಾ ಅಂಬೇಡ್ಕರ್ ಭವನ ರಸ್ತೆಗೆ ಗೋಚರಿಸುವುದಿಲ್ಲ. ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು. ಎದುರಿನ ಕ್ವಾರ್ಟಸ್ ತೆರವುಗೊಳಿಸಿ ಅಲ್ಲಿ ಡಾ. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಚಂದ್ರ ಕುಮಾರ್ ಸೇರಿದಂತೆ ದಲಿತ ಮುಖಂಡರು ಆಗ್ರಹಿಸಿದರು.
ದಲಿತ ದೌಜನ್ಯ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣ ದಾಖಲಿಸುವುದು ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ದೂರು ನೀಡುವವರ ಜಾತಿ ಪ್ರಮಾಣ ಪತ್ರದ ಪರಿಶೀಲನೆ ನಡೆಸಬೇಕು ಎಂದು ಅನಿಲ್ ಉರ್ವಾಸ್ಟೋರ್ ಎಂಬವರು ದೂರಿದರು. ಈ ಸಭೆಯಲ್ಲಿ ಡಿಸಿಪಿ ದಿನೇಶ್‌ಕುಮಾರ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular