ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ಮಹಾನಗರ ಪಾಲಿಕೆ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ಬೀದಿಬದಿ ವ್ಯಾಪಾರಿಗಳ ಬೆಂಬಲ ಉಪಘಟಕದಡಿ ಬೀದಿ ಬದಿ ವ್ಯಾಪಾರಿಗಳ ಅಧಿನಿಯಮ 2014 2019 2020 ಅಧಿನಿಯಮಗಳ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೊತೆಗೆ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು. ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಮಹಾಮಂಡಲದ ಅಧ್ಯಕ್ಷರು ಮತ್ತು ಮೈಸೂರು ಮಹಾನಗರ ಪಾಲಿಕೆ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಭಾಸ್ಕರ್ ರಾಜೆ ಅರಸ್ ಮೈಸೂರು ರವರು ಸಂಪನ್ಮೂಲ ವ್ಯಕ್ತಿಯಾಗಿ ಸಮಗ್ರ ಮಾಹಿತಿ ನೀಡಿದರು.