Friday, April 18, 2025
Google search engine

Homeರಾಜಕೀಯಮಂಗಳೂರು:ಕುಟುಂಬ ರಾಜಕೀಯದ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿ

ಮಂಗಳೂರು:ಕುಟುಂಬ ರಾಜಕೀಯದ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿ

ಮಂಗಳೂರು (ದಕ್ಷಿಣ ಕನ್ನಡ): ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತವನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ತಿಲಾಂಜಲಿ ಇಟ್ಟು ಬಿಜೆಪಿ ನಡೆದುಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ ಎಂದು ಹೇಳಿದರು.

ಇದು ವಿಶೇಷವಾದ ಚುನಾವಣೆ. ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತದಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದರೆ ರಾಜ್ಯದಲ್ಲಿ ಅದಕ್ಕೆ ತಿಲಾಂಜಲಿ ಇಟ್ಟು ಕಾರ್ಯ ನಿರ್ವಹಿಸುತ್ತಿದೆ. ಜನತಾ ಪಕ್ಷ ಕಟ್ಟಿದ್ದು ಇತಿಹಾಸ. ವಿಶ್ವವನ್ನು ಒಂದು ಗೂಡಿ ಸುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಕುಟುಂಬ ರಾಜಕೀಯದ ವಿರುದ್ಧ ಕೆಲಸ ಆಗುತ್ತಿದ್ದರೆ, ಕರ್ನಾಟಕದಲ್ಲಿ ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ. ಇದರ ನೋವಲ್ಲಿ ಕಾರ್ಯಕರ್ತರಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular