ಮಂಗಳೂರು (ದಕ್ಷಿಣ ಕನ್ನಡ): ರಾಜ್ಯ ಸರ್ಕಾರವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಇದೀಗ ಯುವ ನಿಧಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಿದರು. ಇದರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಯುವಜನರ ಬಳಿಗೆ ಯುವ ನಿಧಿಯನ್ನು ಕೊಂಡುಯ್ಯುವ ಸಲುವಾಗಿ ಮತ್ತು ಪ್ರಚಾರಕ್ಕಾಗಿ ಯೋಜನೆಯ ಕುರಿತಾದ ಕರಪತ್ರಗಳು ಮತ್ತು ಭಿತ್ತಿಪತ್ರಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಇವರು ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ, ಉದ್ಯೋಗ ವಿನಿಮಯ ಅಧಿಕಾರಿ ಎಚ್ಚರಪ್ಪ ಬಡಿಗೇರ್ , ಸಹಾಯಕ ನಿರ್ದೇಶಕರಾದ ಸತ್ಯಲತಾ, ಸಹಾಯಕ ಸಾಂಖ್ಯಿಕ ಅಧಿಕಾರಿಯವರಾದ ವಿಜಯಲಕ್ಷ್ಮಿ ಹಾಗೂ ನಗರ ಅಭಿಯಾನ ವ್ಯವಸ್ಥಾಪಕ ಅಚ್ಯುತ ನಾಯ್ಕ್ ಮೂಡುಬಗೆ ಮತ್ತು ಎನ್ ಚಿತ್ತರಂಜನ್ ದಾಸ್, ಹಾಗೂ ಇತರರು ಉಪಸ್ಥಿತಿತರಿದ್ದರು.