ಮಂಗಳೂರು(ದಕ್ಷಿಣ ಕನ್ನಡ): ಸಾಧಕರ ಬದುಕಿನ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿಸಿದರೆ ಅದು ಮುಂದಿನ ಯುವ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಹೇಳಿದ್ದಾರೆ.
ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಮಹಾಬಲ ಶೆಟ್ಟಿ ಕೂಡ್ಲು ಅವರ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿ ಅವರ ಸಾಧನೆಗಳು ‘ಮಹಾಪರ್ವ’ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಸ್ಪೂರ್ತಿಯಾಗಲಿದೆ ಎಂದು ಅವರು ಹೇಳಿದರು.