ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ. ದೂರದ ಬೊಂದೆಲ್ ನ ಸಂತ ಲಾರೆನ್ಸರ ಚರ್ಚ್‌ನ ಶತಮಾನೋತ್ಸವ ಸಮಾರೋಪ, ನವೀಕೃತ ಚರ್ಚ್ ಉದ್ಘಾಟನೆ ಹಾಗೂ ಸಂತ ಲಾರೆನ್ಸರ ಅಧಿಕೃತ ಪುಣ್ಯ ಕ್ಷೇತ್ರ ಉದ್ಘಾಟನೆ, ಬಲಿಪೂಜೆ ನ. 18ರಂದು ನಡೆಯಲಿದೆ.
ಕಾರ್ಯಕ್ರಮದ ಬಗ್ಗೆ ಪ್ರೆಸ್ ಕ್ಲಬ್ ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ಆ್ಯಂಡ್ರೂ ಲಿಯೋ ಡಿಸೋಜಾ ಮಾಹಿತಿ ನೀಡಿದರು.
ಮಂಗಳೂರು ಧರ್ಮಪ್ರಾಂತದ ಬಿಷಪ್ ಅತೀ ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ, ವಿಶ್ರಾಂತ ಬಿಷಪ್ ಅತೀ ವಂ. ಡಾ.ಅಲೋಶಿಯಸ್ ಪಾವ್ಲ್ ಡಿಸೋಜ, ಉಡುಪಿ ಧರ್ಮಪ್ರಾಂತದ ಬಿಷಪ್ ಅತೀ ವಂ. ಜೆರಾಲ್ಡ್ ಐಸಾಕ್ ಲೋಬೋ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.