Wednesday, July 23, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು: ಜುಲೈ 26 ರಂದು ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ

ಮಂಗಳೂರು: ಜುಲೈ 26 ರಂದು ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದ್ದಾರೆ.

ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ರೆಡ್ ಕ್ರಾಸ್ ಪ್ರೇರಣ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕರ್ನಾಟಕದ ರಾಜ್ಯಪಾಲ ಹಾಗೂ ಐಆರ್‌ಸಿಎಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಐಆರ್‌ಸಿಎಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್.ಡಿ., ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ಎನ್.ವಿನಯ ಹೆಗ್ಡೆ, ಐಆರ್‌ಸಿಎಸ್ ರಾಜ್ಯ ಘಟಕದ ಚೇರ್ಮನ್ ಬನ್ನೂರು ರಾಜೀವ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ ರಾವ್ ಐಪಿಎಸ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.


ಸುಮಾರು 20 ಸಾವಿರ ಚದರ ಅಡಿಯ ಭವ್ಯ ಶತಮಾನೋತ್ಸವ ಕಟ್ಟಡ ತಳ ಅಂತಸ್ತು, ನೆಲ ಅಂತಸ್ತು ಸಹಿತ ಒಟ್ಟು 4 ಅಂತಸ್ತು ಹೊಂದಿದೆ. ನೆಲ ಅಂತಸ್ತಿನಲ್ಲಿ ಕಚೇರಿ, ಸಂದರ್ಶಕರ ಕೊಠಡಿ, ಮೀಟಿಂಗ್ ಹಾಲ್, 1ನೇ ಅಂತಸ್ತಿನಲ್ಲಿ 300 ಆಸನಗಳ ‘ಪ್ರೇರಣಾ’ ಹವಾ ನಿಯಂತ್ರಿತ ಸಭಾಂಗಣ, 2ನೇ ಅಂತಸ್ತಿನಲ್ಲಿ ಸುಮಾರು 500 ಮಂದಿ ಸಾಮರ್ಥ್ಯದ ‘ಸೀ ವ್ಯೂ’ಸಭಾಂಗಣವಿದೆ. ಸಾರ್ವಜನಿಕ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು ಮತ್ತು ದಾನಿಗಳ ನೆರವಿನಿಂದ ನೂತನ ಕಟ್ಟಡ ನಿರ್ಮಾಣಗೊಂಡಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಡಾ.ಸತೀಶ್ ರಾವ್, ಖಜಾಂಜಿ ಮೋಹನ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ಪುಷ್ಪರಾಜ್‌ಜೈನ್, ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಸುಮನಾ ಬೋಳಾರ್, ಗುರುದತ್ ನಾಯಕ್, ಎ.ವಿಠಲ, ಪಿಬಿ ಹರೀಶ್ ರೈ ಮುಂತಾದವರು ಹಾಜರಿದ್ದರು.

RELATED ARTICLES
- Advertisment -
Google search engine

Most Popular