ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರ ಹೊರವಲಯದ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ ಕೆಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ.7ರ ರಾತ್ರಿ ವೇಳೆ ಕೆಲ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್‌ಗೆ ತೆರಳಿ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಅಸ್ವಸ್ಥ ವಿದ್ಯಾರ್ಥಿಗಳ ಪೈಕಿ ಬಹುತೇಕ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಕಾಲೇಜಿನ ಆಡಳಿ ಮಂಡಳಿಯವ್ರು ಇದನ್ನು ನಿರಾಕರಿಸಿದ್ದು ಕೆಲವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಹೇಳಿದೆ.